ನವದೆಹಲಿ, ಡಿ.14 : ದೇಶದಲ್ಲಿಂದು 27,071 ಹೊಸ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 98,84,100ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 336 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,43,355ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. ಒಂದೇ ದಿನ 30,695 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟಾರೆ 93,88,159 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಮೂಲಕ ದೇಶದಲ್ಲಿ 3,52,586 ಸಕ್ರಿಯ ಸೋಂಕಿತ ರೋಗಿಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಪ್ರಸ್ತುತ ದೇಶದಲ್ಲಿ 3,52,586 ಸಕ್ರಿಯ ಪ್ರಕರಣಗಳು ಇವೆ.
ಭಾರತದಲ್ಲಿ ನಿನ್ನೆ ಒಂದೇ ದಿನ 8,55,157 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 15,45,66,990 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ದೇಶದಲ್ಲಿ 27,071 ಹೊಸ ಕೊರೊನಾ ಪ್ರಕರಣಗಳು ಪತ್ತೆ, 336 ಮಂದಿ ಬಲಿ
