Sunday, June 13, 2021
Homeಸುದ್ದಿ ಜಾಲಕೋವಿಡ್ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ನಾನು ಜನ್ಮದಿನ ಆಚರಿಸಿಕೊಳ್ಳೋದಿಲ್ಲ;ಹೆಚ್ ಡಿಕೆ

ಇದೀಗ ಬಂದ ಸುದ್ದಿ

ಕೋವಿಡ್ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ನಾನು ಜನ್ಮದಿನ ಆಚರಿಸಿಕೊಳ್ಳೋದಿಲ್ಲ;ಹೆಚ್ ಡಿಕೆ

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ಜನ್ಮದಿನಕ್ಕೆ ಇನ್ನೆರಡು ದಿನ ಬಾಕಿಯಿದ್ದು, ಪ್ರತಿವರ್ಷ ಎಚ್​ಡಿಕೆ ನಿವಾಸ, ಜೆಡಿಎಸ್​ ಪಕ್ಷದ ಕಚೇರಿ ಬಳಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದರು. ಆದರೇ ಈ ಬಾರಿ ಸ್ವತಃ ಕುಮಾರಸ್ವಾಮಿಯವರೇ ತಾನು ಹುಟ್ಟುಹ್ಬವನ್ನು ಆಚರಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು, ಡಿ.16 ನನ್ನ‌ ಜನ್ಮದಿನ. ಕೋವಿಡ್ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು.

ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img