ಬೆಂಗಳೂರು : ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುತ್ತೇವೆ. ಆದರೆ ಉಪವಾಸ ಸತ್ಯಗ್ರಹ ಮುಂದುವರೆಯುತ್ತೆ. ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿ ಮುಷ್ಕರ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ವಾಪಸ್ ಪಡೆಯುವ ಬಗ್ಗೆ ಘೋಷಣೆ ಮಾಡುತ್ತೇವೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖಂಡರ ಜೊತೆ ಚರ್ಚೆ ನಡೆಸಿ ಮುಷ್ಕರ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.