Thursday, January 21, 2021
Home ಸುದ್ದಿ ಜಾಲ ಲಾರಿ,ಕಾರಿನ ನಡುವೆ ಅಪಘಾತ : ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ

ಇದೀಗ ಬಂದ ಸುದ್ದಿ

ಲಾರಿ,ಕಾರಿನ ನಡುವೆ ಅಪಘಾತ : ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ

ತಿಪಟೂರುರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ವಾಹನ ಮತ್ತು ಕಾರು ನಡುವೆ ಮಂಗಳವಾರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ತಿಮ್ಲಾಪುರ ಗ್ರಾಮದ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನೀರು ತುಂಬಿದ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ ಶಶಿಕಲಾ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲ್ಲೂಕಿನ ಸೂಗೂರು ಮತ್ತಿಘಟ್ಟ ಗ್ರಾಮದವರಾಗಿದ್ದು, ದೇವಾಲಯಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

TRENDING