Wednesday, January 27, 2021
Home ಕೋವಿಡ್-19 ದೇಶದಲ್ಲಿಂದು 26,382 ಕೊರೊನಾ ಕೇಸ್ ಪತ್ತೆ,387 ಮಂದಿ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿಂದು 26,382 ಕೊರೊನಾ ಕೇಸ್ ಪತ್ತೆ,387 ಮಂದಿ ಬಲಿ

ನವದೆಹಲಿ: ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೋನಾ 2ನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ವಿಶ್ಲೇಷಣೆಗಳ ನಡುವೆಯೇ, ದೇಶದಲ್ಲಿ ವೈರಸ್ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಯುತ್ತಿರುವುದು ಕಂಡು ಬರುತ್ತಿವೆ. ಭಾರತದಲ್ಲಿ ಬುಧವಾರ ಬೆಳಿಗ್ಗೆ 8 ರವರೆಗಿನ 24 ತಾಸುಗಳ ಅವಧಿಯಲ್ಲಿ 26,382 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಒಂದೇ ದಿನ 387 ಮಂದಿ ಸಾವನ್ನಪ್ಪಿದ್ದು, ಸೋಂಕಿನಿಂದ ಈ ವರೆಗೂ ಮರಣವನ್ನಪ್ಪಿದವರ ಸಂಖ್ಯೆ 1,44,096ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 99,32,548ಕ್ಕೆ ಏರಿಕೆಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಸೋಂಕಿತರ ಸಂಖ್ಯೆ 1 ಕೋಟಿ ಗಡಿ ದಾಟಲಿದೆ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 99,32,548 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 33,813 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಚೇತರಿಸಿಕೊಂಡವರ ಸಂಖ್ಯೆ 94,56,449ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 3,32,002 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

TRENDING