Saturday, January 23, 2021
Home ಸುದ್ದಿ ಜಾಲ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಕಲಬುರಗಿ : ಪ್ರಸಕ್ತ 2020-21 ನೇ ಸಾಲಿನ ಹಿಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆ ಕಾರ್ಯವು ಈಗಾಗಲೇ ಡಿಸೆಂಬರ್ 10 ರಿಂದ ಜಿಲ್ಲೆಯಾದ್ಯಂತ ಆರಂಭಗೊಂಡಿದೆ. ಸರ್ಕಾರದ ಆದೇಶದಂತೆ ಈ ಬಾರಿಯ ಬೆಳೆ ಸಮೀಕ್ಷೆ ಕಾರ್ಯವನ್ನು ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಹಾಗೂ ಕಮಲಾಪುರ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ಅವರು ತಿಳಿಸಿದ್ದಾರೆ.

ಕಲಬುರಗಿ ಹಾಗೂ ಕಮಲಾಪೂರ ತಾಲೂಕುಗಳ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ‘ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21’ (Rabi Season Farmer App 2020-21) ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು ನಿಗದಿತ ಅವಧಿಯೊಳಗಾಗಿ ಬೆಳೆ ವಿವರ ದಾಖಲಿಸಬೇಕೆಂದು ಅವರು ತಿಳಿಸಿದ್ದಾರೆ.

TRENDING