Sunday, June 13, 2021
Homeಸುದ್ದಿ ಜಾಲಪ್ರಾಜೆಕ್ಟ್ ಲೀಡ್ ಮತ್ತು ಡಿಸೈನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಪ್ರಾಜೆಕ್ಟ್ ಲೀಡ್ ಮತ್ತು ಡಿಸೈನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಲೀಡ್ ಮತ್ತು ಡಿಸೈನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದ್ದು, ಡಿಸೆಂಬರ್ 21, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಎಂ.ಇ/ಎಂ.ಟೆಕ್, ಪಿಹೆಚ್,ಡಿ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ: ಪ್ರಾಜೆಕ್ಟ್ ಲೀಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 87,000 ರಿಂದ 1,86,000ರೂ ವೇತನ ಸಿಗಲಿದೆ. ಡಿಸೈನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 38,440 ರೂ.ನಿಂದ 96,720 ರೂ. ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.iisc.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ನಂತರ ಮಾಹಿತಿಯನ್ನು ಭರ್ತಿ ಮಾಡಬೇಕು. ನಂತರ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img