ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 18 ಹಾಗೂ 19 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಬಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮಂಡ್ಯ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು ಹಾಗೂ ರಾಮನಗರದಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ ಎರಡು ದಿನಗಳಿಂದ ಮುಂಬೈನಲ್ಲಿ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.