Monday, January 18, 2021
Home ಕೋವಿಡ್-19 ಕೋವಿಡ್-19: ದೇಶದಲ್ಲಿ ಒಂದೇ ದಿನ 24,010 ಹೊಸ ಸೋಂಕು...

ಇದೀಗ ಬಂದ ಸುದ್ದಿ

ಕೋವಿಡ್-19: ದೇಶದಲ್ಲಿ ಒಂದೇ ದಿನ 24,010 ಹೊಸ ಸೋಂಕು ಪ್ರಕರಣಗಳು ಪತ್ತೆ!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 99,56,558ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 24,010 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 99,56,558ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 355 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,44,451ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 33,291 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 94,89,740ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,22,366 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

TRENDING