Tuesday, January 26, 2021
Home ಸುದ್ದಿ ಜಾಲ ವಾಹನ ಮಾಲೀಕರಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ವಾಹನ ಮಾಲೀಕರಿಗೆ ಬಹುಮುಖ್ಯ ಮಾಹಿತಿ

 ನವದೆಹಲಿ: ಹೆದ್ದಾರಿಗಳಲ್ಲಿ ಟೋಲ್ ಫ್ರೀ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಟೋಲ್ ಶುಲ್ಕವನ್ನು ಬ್ಯಾಂಕ್ ಖಾತೆಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ.

ವಾಹನಗಳ ತಡೆರಹಿತ ಚಾಲನೆಗೆ ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಿಪಿಎಸ್ ತಂತ್ರಜ್ಞಾನ ಆಧಾರಿತ ಟೋಲ್ ಶುಲ್ಕ ಸಂಗ್ರಹ ವ್ಯವಸ್ಥೆ ಜಾರಿಗೆ ತರಲಿದೆ. ಮುಂದಿನ ಎರಡು ವರ್ಷಗಳಲ್ಲಿ ಭಾರತ ಟೋಲ್ ಮುಕ್ತವಾಗಲಿದೆ.

ವಾಹನಗಳ ಚಲನೆಯನ್ನು ಆಧರಿಸಿ ಟೋಲ್ ಮೊತ್ತವನ್ನು ನೇರವಾಗಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸಲಾಗುವುದು. ಈಗ ಎಲ್ಲ ವಾಣಿಜ್ಯ ವಾಹನಗಳು ವಾಹನ ಟ್ರ್ಯಾಕಿಂಗ್ ವ್ಯವಸ್ಥೆಗಳೊಂದಿಗೆ ಬರುತ್ತಿವೆ. ಹಳೆ ವಾಹನಗಳಿಗೆ ಜಿಪಿಎಸ್ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರದಿಂದ ಯೋಜನೆ ರೂಪಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಾರ್ಚ್ ತಿಂಗಳ ವೇಳೆಗೆ 34 ಸಾವಿರ ಕೋಟಿ ರೂಪಾಯಿ ಟೋಲ್ ಶುಲ್ಕ ಸಂಗ್ರಹ ಆಗಬಹುದು. ಟೋಲ್ ಸಂಗ್ರಹಕ್ಕೆ ಜಿಪಿಎಸ್ ತಂತ್ರಜ್ಞಾನವನ್ನು ಬಳಸುವ ಮೂಲಕ ಮುಂದಿನ 5 ವರ್ಷಗಳಲ್ಲಿ ಟೋಲ್ ಆದಾಯವನ್ನು 1,34,000 ಕೋಟಿ ರೂಪಾಯಿಗೆ ಹೆಚ್ಚಳ ಮಾಡುವ ಗುರಿ ಹೊಂದಲಾಗಿದೆ.

TRENDING