Monday, January 25, 2021
Home ಬೆಂಗಳೂರು BBMP ಚುನಾವಣೆ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಇದೀಗ ಬಂದ ಸುದ್ದಿ

BBMP ಚುನಾವಣೆ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ನವದೆಹಲಿ : ರಾಜ್ಯ ಸರ್ಕಾರ ಹೈಕೋರ್ಟ್ ಬಿಬಿಎಪಿ ಚುನಾವಣೆ ಸಂಬಂಧ ನೀಡಿದ್ದಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಆದೇಶಕ್ಕೆ ತಡೆ ನೀಡಿರುವಂತ ಸುಪ್ರೀಂ ಕೋರ್ಟ್, ರಾಜ್ಯ ಚುನಾವಣಾ ಆಯೋಗಕ್ಕೆ ಸಂಬಂಧ ನೋಟಿಸ್ ಜಾರಿ ಮಾಡಿದೆ. ಮೂಲಕ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದಂತಾಗಿದೆ.

ಇಂದು ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆ ಸಂಬಂಧ ಹೈಕೋರ್ಟ್ ನೀಡಿದ್ದಂತ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ, ಸಿಇಸಿ ಮತ್ತು ಎಂ.ಶಿವರಾಜು ಮತ್ತಿತರರಿಂದ ಉತ್ತರವನ್ನು ಕೋರಿದ್ದು, ನೋಟಿಸ್ ಜಾರಿ ಮಾಡಿದೆ.

ಹೀಗಾಗಿ ಬಿಬಿಎಂಪಿ ಚುನಾವಣೆ ಮುಂದೂಡಲ್ಪಡಲಿದೆ ಎನ್ನಲಾಗಿದ್ದು, ಆ ಬಗ್ಗೆ ಕಾದು ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಜನವರಿಗೆ ಮುಂದೂಡಿರುವ ಕಾರಣ, ಅಂದಿನ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.

ಅಂದಹಾಗೇ, ರಾಜ್ಯ ಹೈಕೋರ್ಟ್, 198 ವಾರ್ಡ್ ಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಆದೇಶಿಸಿತ್ತು. ಚುನಾವಣಾ ಕಾರ್ಯಕ್ರಮವನ್ನು ಆರು ವಾರಗಳ ಒಳಗೆ ಪ್ರಕಟಿಸುವಂತೆಯೂ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಇಂತಹ ಆದೇಶಕ್ಕೆ ಇದೀಗ ಸುಪ್ರೀಂ ಕೋರ್ಟ್ ನಿಂದ ತಡೆ ನೀಡಲಾಗಿದೆ.

TRENDING