Tuesday, January 19, 2021
Home ಸುದ್ದಿ ಜಾಲ ಬಿಪಿಎಲ್, ಎಪಿಎಲ್ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಬಿಪಿಎಲ್, ಎಪಿಎಲ್ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಳಿಗೆ ಜನವರಿಯಲ್ಲಿ ಅರ್ಜಿ ಆಹ್ವಾನಿಸಲಾಗುತ್ತದೆ. ಬಾಕಿ ಉಳಿದ ಅರ್ಜಿಗಳು ವಿಲೇವಾರಿ ಜನವರಿ 10 ರ ನಂತರ ಆರಂಭಿಸುವ ಸಾಧ್ಯತೆ ಇದೆ.

ಆಹಾರ ಖಾತೆ ಸಚಿವ ಕೆ. ಗೋಪಾಲಯ್ಯ ಅವರು ಡಿಸೆಂಬರ್ ಎರಡನೇ ವಾರದಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು. ಬಾಕಿ ಅರ್ಜಿ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದ್ದರು. ಆದರೆ, ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜನವರಿ 10 ರಿಂದ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಆಧಾರ್ ಕಾರ್ಡ್, ವಾರ್ಷಿಕ ಆದಾಯ ಮತ್ತು ವಾಸಸ್ಥಳದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ನೀಡಬೇಕಿದೆ. ಜನವರಿ ಎರಡನೇ ವಾರದಲ್ಲಿ ಅನುಮತಿ ಸಿಗಲಿದೆ ಎನ್ನಲಾಗಿದೆ.

TRENDING