Tuesday, January 19, 2021
Home ಜಿಲ್ಲೆ ಮೈಸೂರು ಹಾವು ಕಚ್ಚಿ ಯುವಕ ಸಾವು

ಇದೀಗ ಬಂದ ಸುದ್ದಿ

ಹಾವು ಕಚ್ಚಿ ಯುವಕ ಸಾವು

ಮೈಸೂರು: ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ, 21 ವರ್ಷದ ಯುವಕ ಮೃತಪಟ್ಟಿದ್ದಾನೆ.

ಜಿಲ್ಲೆಯ ಹುಣಸೂರು ತಾಲೂಕಿನ ಕಾಳಬೋಚನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ರಾಗಿ ಬೆಳೆ ಕಟಾವು ಮಾಡುವಾಗ ಈ ಘಟನೆ ನಡೆದಿದೆ. ಸಂತೋಷ್(21) ಮೃತ ಯುವಕನಾಗಿದ್ದು, ಸಂತೋಷ್ ಅಂತಿಮ‌ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದರು.

ಹನಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಮೃತಪಟ್ಟಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

TRENDING