Saturday, January 23, 2021
Home ಸುದ್ದಿ ಜಾಲ ಹನಿ ನೀರಾವರಿ ಅಳವಡಿಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಹನಿ ನೀರಾವರಿ ಅಳವಡಿಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

 ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ರೈತರಿಗೆ 2020-21ನೇ ಸಾಳಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ/ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.

ಕಾರ್ಯಾದೇಶ ಪಡೆಯದೇ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ ಎಂಬು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ, ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸುವುದು.

TRENDING