Monday, January 18, 2021
Home ಜಿಲ್ಲೆ ಚಿತ್ರದುರ್ಗ 2 ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಇದೀಗ ಬಂದ ಸುದ್ದಿ

2 ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

  ಚಿತ್ರದುರ್ಗ : ಹಿರಿಯೂರು-ಹುಳಿಯಾರು ರಸ್ತೆಯಲ್ಲಿ ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ತಮಿಳುನಾಡು ಹಾಗೂ ಕರ್ನಾಟಕ ನೋಂದಣಿ ಲಾರಿಗಳ ನಡುವೆ ಈ ಅಪಘಾತ ಸಂಭವಿಸಿದೆ.

ಹಿರಿಯೂರಿನಿಂದ ಹುಳಿಯಾರು ಕಡೆಗೆ ಹೊರಟಿದ್ದ ಲಾರಿ ಹಾಗೂ ಹುಳಿಯಾರು ಕಡೆಯಿಂದ ಹಿರಿಯೂರಿಗೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TRENDING