Tuesday, January 19, 2021
Home ಕೋವಿಡ್-19 ಭಾರತದಲ್ಲಿ ಒಂದೇ ದಿನದಲ್ಲಿ 24,337 ಕೊರೋನಾ ಪ್ರಕರಣ ಪತ್ತೆ , 333 ಮಂದಿ ಬಲಿ

ಇದೀಗ ಬಂದ ಸುದ್ದಿ

ಭಾರತದಲ್ಲಿ ಒಂದೇ ದಿನದಲ್ಲಿ 24,337 ಕೊರೋನಾ ಪ್ರಕರಣ ಪತ್ತೆ , 333 ಮಂದಿ ಬಲಿ

 ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ 24,337 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ ದೇಶಾದ್ಯಂತ 24,337 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,00,55,560ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 333 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,45,810ಕ್ಕೆ ಏರಿಕೆಯಾಗಿದೆ.

ಇನ್ನು ಒಂದೇ ದಿನದಲ್ಲಿ 25,709 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 96,06,111 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,03,639 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶಾದ್ಯಂತ 9,00,134 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೆ ಈ ವರೆಗೂ 16,20,98,329 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

TRENDING