Wednesday, January 27, 2021
Home ಜಿಲ್ಲೆ ದಾವಣಗೆರೆ ದಾವಣಗೆರೆ : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಅಧಿಕಾರಿ

ಇದೀಗ ಬಂದ ಸುದ್ದಿ

ದಾವಣಗೆರೆ : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಅಧಿಕಾರಿ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿಯೇ ಅಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಎಂ.ಬಿ. ಶಿವಕುಮಾರ್ (46) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TRENDING