ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೆಡ್ಲರ್ ವಿನಯ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು,ಇದೀಗ ಕನ್ನಡ ಚಿತ್ರರಂಗದ ಖ್ಯಾತ ನಟಿಯೋರ್ವರ ಜೊತೆ ನಂಟಿರುವುದಾಗಿ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.
ಸಿಸಿಬಿ ಪೊಲೀಸರು ವಿನಯ್ ನನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಸ್ಯಾಂಡಲ್ ವುಡ್ ನ ಖ್ಯಾತ ನಟಿಯೊಬ್ಬರ ಹೆಸರು ಬಾಯಿಬಿಟ್ಟಿದ್ದಾನೆ ಎನ್ನಲಾಗಿದ್ದು, ವಿನಯ್ ನ ಮಾಹಿತಿಯಂತೆ ನಟಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿಸಿಬಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.