Wednesday, January 27, 2021
Home ರಾಜ್ಯ ರಾಜ್ಯದಲ್ಲಿ`ನೈಟ್ ಕರ್ಪ್ಯೂ' ಜಾರಿ ಮಾಡಲ್ಲ : ಸಿಎಂ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ`ನೈಟ್ ಕರ್ಪ್ಯೂ’ ಜಾರಿ ಮಾಡಲ್ಲ : ಸಿಎಂ ಯಡಿಯೂರಪ್ಪ

ಬೆಂಗಳೂರು ; ದೇಶದಾದ್ಯಂತ ಹೊಸ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡುಮಾಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುವುದು. ಮುಂಬೈ ಮಾದರಿಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ ಎಂದು ಹೇಳಿದ್ದಾರೆ.

TRENDING