ವಾಷಿಂಗ್ಟನ್,ಡಿ.22-ಅಮೆರಿಕಾದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಅಮೇಕ ಮತ್ತು ಭಾರತದ ನಡುವಿನ ಸಹಭಾಗಿತ್ವ ಹೆಚ್ಚಿಸುವಲ್ಲಿ ಮತ್ತು ಭಾರತ ಜಾಗತಿಕ ಶಕ್ತಿಯಾಗಿ ಹೊರ ಹೊಮ್ಮುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಲೀಜನ್ ಆಫ್ ಮೆರಿಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಶ್ವೇತಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತರಣ್ಜಿತ್ ಸಿಂಗ್ ಸಂಧು ಅವರು ಪ್ರಧಾನಮಂತ್ರಿಗಳ ಪರವಾಗಿ ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಓ ಬ್ರೈನ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪಿಎಂ ಶಿಂಜೋ ಅಬೇ ಈ ಹಿಂದೆ ಲೀಜನ್ ಆಫ್ ಮೆರಿಟ್ ಪ್ರಶಸ್ತಿಗೆ ಪಾತ್ರರಾಗಿದ್ದ ಪ್ರಮುಖರಾಗಿದ್ದಾರೆ.