Tuesday, January 19, 2021
Home ರಾಜ್ಯ ಗ್ರಾಮೀಣಾ ಪ್ರದೇಶದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಗ್ರಾಮೀಣಾ ಪ್ರದೇಶದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

 ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣಾ ಪ್ರದೇಶದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಹೈನುಗಾರಿಕೆ ಮೂಲಕ ಜೀವನೋಪಾಯ ಕಲ್ಪಿಸಿಕೊಡುವ ಕ್ಷೀರ ಸಂಜೀವಿನಿ ಯೋಜನೆ ಒಪ್ಪಂದಗಳಿಗೆ ಡಿಸಿಎಂ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಅಧಿಕಾರಿಗಳು ಸಹಿ ಹಾಕಿದ್ದಾರೆ.

ಕ್ಷೀರ ಸಂಜೀವಿನಿ ಯೋಜನೆಯ ಒಪ್ಪಂದವು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ-ಸಂಜೀವಿನಿ ಹಾಗೂ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಡುವೆ ಏರ್ಪಟ್ಟಿದೆ.

ಈಗಾಗಲೇ ಈ ಯೋಜನೆಯ ಮೊದಲ ಹಂತವು ಜಾರಿಯಾಗಿದ್ದು, ಇದೀಗ ಎರಡನೇ ಹಂತಕ್ಕಾಗಿ ಒಡಂಬಡಿಕೆ ಆಗಿದೆ. ಮೊದಲ ಹಂತದಲ್ಲಿ ಗ್ರಾಮೀಣಾ ಪ್ರದೇಶದ ಒಟ್ಟು 10 ಸಾವಿರದಷ್ಟು ಬಡ ಮತ್ತು ಕಡುಬಡ ಕುಟುಂಬಗಳ ಮಹಿಳೆಯರನ್ನು ಗುರುತಿಸಿ 250 ಮಹಿಳಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಮೂಲಕ ಸಂಘಟಿಸಿ ಈ ಎಲ್ಲಾ ಮಹಿಳೆಯರಿಗೆ ಹೈನುಗಾರಿಕೆ ಕುರಿತಂತೆ ವಿವಿಧ ಬಗೆಯ ತರಬೇತಿ, ಬ್ಯಾಂಕ್ ಸಾಲ ಸೌಲಭ್ಯ ಮತ್ತು 9,945 ಆರೋಗ್ಯವಂತ ಹೈನುಗಾರಿಕೆ ರಾಸುಗಳನ್ನು ಖರೀದಿಸಿ ವಿಮೆ ಮಾಡಿಸಲಾಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

TRENDING