Thursday, January 21, 2021
Home ರಾಜ್ಯ ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಇಂದು ರಾತ್ರಿಯಿಂದ ನೈಟ್ ಕರ್ಪ್ಯೂ ಜಾರಿಯಾಗಲಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ರಾತ್ರಿ ವೇಳೆ ಇರೋದಿಲ್ಲ ಎನ್ನಲಾಗುತ್ತಿತ್ತು. ಆದ್ರೇ ಇದಕ್ಕೆ ತೆರೆ ಎಳೆದಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಾರಿಗೆ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇರಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಯುಕೆ ಹೊಸ ಕೊರೋನಾ ವೈರಸ್ ಸೋಂಕಿನ ಹಿನ್ನಲೆಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ತುರ್ತು ಅವಶ್ಯಕತೆ ಹೊರತಾಗಿ ಎಲ್ಲವೂ ಬಂದ್ ಆಗಲಿದೆ ಎನ್ನಲಾಗುತ್ತಿತ್ತು. ಅಲ್ಲದೇ ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ರಾತ್ರಿ ಸಂಚಾರ ಸ್ಥಗಿತಗೊಳ್ಳಲಿದೆ ಎನ್ನಲಾಗುತ್ತಿತ್ತು.

ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು, ರಾಜ್ಯ ರಸ್ತೆ ಸಾರಿಗೆ ಸಂಚಾರದಲ್ಲಿ ರಾತ್ರಿ ಕರ್ಪ್ಯೂ ಇದ್ದರೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ನೈಟ್ ಕರ್ಪ್ಯೂ ಇದ್ದರೂ, ಯಥಾಸ್ಥಿತಿಯಲ್ಲಿ ರಾಜ್ಯದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಗಳ ಸಂಚಾರ ಇರಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಾರಿಗೆ ಸಂಚಾರದಲ್ಲಿ ಯಾವುದೇ ಬಂದ್ ಆಗೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

TRENDING