Sunday, January 24, 2021
Home ದೆಹಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ಇದೀಗ ಬಂದ ಸುದ್ದಿ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಲು ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ತೆರಳಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ವಾರವೂ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಹಾಗೂ ಕಾಯ್ದೆ ರದ್ದು ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

TRENDING