Tuesday, January 26, 2021
Home ಕೋವಿಡ್-19 ಬ್ರಿಟನ್ ನ ರೂಪಾಂತರ ಸೋಂಕು : ಕೇಂದ್ರ ಅರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಇದೀಗ ಬಂದ ಸುದ್ದಿ

ಬ್ರಿಟನ್ ನ ರೂಪಾಂತರ ಸೋಂಕು : ಕೇಂದ್ರ ಅರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

 ನವದೆಹಲಿ: ಬ್ರಿಟನ್ ​ನಲ್ಲಿ ಹೊಸ ಪ್ರಭೇದದ ಕೋವಿಡ್ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ಬ್ರಿಟನ್​ನಿಂದ ಬರುವವರಿಗಾಗಿ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ.

ಯುರೋಪಿಯನ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್, ರೂಪಾಂತರಗೊಂಡ ವೈರಸ್​ ಅತಿ ವೇಗವಾಗಿ ಮತ್ತು ಕಿರಿಯ ವಯಸ್ಸಿನವರ ಮೇಲೆ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಅಂದಾಜಿಸಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಗ್ಲೆಂಡ್​ನಿಂದ ಭಾರತಕ್ಕೆ ಡಿಸೆಂಬರ್ 31 ರವರೆಗೆ ಅಥವಾ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ವಿಮಾನ ಯಾನ ಸ್ಥಗಿತಗೊಳಿಸಲಾಗಿದ್ದು, ಕೆಲ ಮಾರ್ಗಸೂಚಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ.

ಇಂಗ್ಲೆಂಡ್​ನಿಂದ ಭಾರತಕ್ಕೆ ಬರುವವರನ್ನು ಆರ್​ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ.
ವರದಿ ಪಾಸಿಟಿವ್​ ಬಂದಲ್ಲಿ ಸ್ಪೈಕ್ ಜೀನ್ ಆಧಾರಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಶಿಫಾರಸು ಮಾಡಲಾಗುವುದು.
ಸೋಂಕಿತರನ್ನು ಪ್ರತ್ಯೇಕ ಘಟಕದಲ್ಲಿ ಐಸೋಲೇಷನ್​ನಲ್ಲಿರಿಸಲಾಗುವುದು. ಈ ಘಟಕಗಳನ್ನು ಆಯಾ ರಾಜ್ಯಗಳ ಆರೋಗ್ಯಾಧಿಕಾರಿಗಳು ಸ್ಥಾಪಿಸುವರು.
ಸೋಂಕಿತರ ವರದಿಯು ಕೊರೊನಾ ಹೊಸ ರೂಪಾಂತರದ ಲಕ್ಷಣವನ್ನು ಸೂಚಿಸಿದರೆ ಅವರಿಗೆ ಕ್ಲಿನಿಕಲ್ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಲಾಗುವುದು.
ಕಳೆದ ನಾಲ್ಕು ವಾರಗಳಲ್ಲಿ ಅಂದರೆ ನವೆಂಬರ್ 25 ರಿಂದ ಡಿಸೆಂಬರ್ 23 ರವರೆಗೆ ಬ್ರಿಟನ್​ನಿಂದ ಭಾರತಕ್ಕೆ ಬಂದ ಪ್ರಯಾಣಿಕರ ತಪಾಸಣೆ ಮಾಡಲಾಗುವುದು.
ಇಂತವರನ್ನು ಆಯಾ ಜಿಲ್ಲೆಗಳ ಸಂಬಂಧಪಟ್ಟ ಅಧಿಕಾರಿಗಳು ಸಂಪರ್ಕಿಸಿ ತಪಾಸಣೆಗೊಳಪಡಿಸಬೇಕು

TRENDING