Tuesday, January 26, 2021
Home ಅಂತರ್ ರಾಷ್ಟ್ರೀಯ ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ

ಇದೀಗ ಬಂದ ಸುದ್ದಿ

ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ

 ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ.

ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ ಕೊರೋನಾ ದೃಢಪಟ್ಟಿದೆ ಎಂದು ಬ್ರಿಟನ್ ನ ಆರೋಗ್ಯ ಸಚಿವ ಮ್ಯಾಟ್ ಕಾನ್ಕಾಕ್ ಹೇಳಿದ್ದಾರೆ.

ಬ್ರಿಟನ್ ನಲ್ಲಿ ಪತ್ತೆಯಾಗಿರುವ ವೈರಾಣು ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ, ಆದರೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಈ ಹೊಸ ವೈರಾಣು ರೂಪಾಂತರಗೊಂಡಿರುವ ವೈರಸ್ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

 

TRENDING