ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಎಂಬಿಬಿಎಸ್ ಮಾಡಿದವರು ಒಂದು ವರ್ಷ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಎಂಬಿಬಿಎಸ್ ಮಾಡಿದವರು ಗ್ರಾಮೀಣಾ ಪ್ರದೇಶದಲ್ಲಿ ಒಂದು ವರ್ಷ ಕೆಲಸ ಮಾಡಬೇಕು. ಈ ಬಗ್ಗೆ ಈಗಾಗಲೇ ಸರ್ಕಾರದಿಂದ ಆದೇಶ ಮಾಡಲಾಗಿದೆ. ಇದರಿಂದ ಮುಂದೆ ವೈದ್ಯರ ಕೊರತೆ ಆಗುವುದಿಲ್ಲ ಎಂದು ಹೇಳಿದರು.
ವೈದ್ಯರ ಸೇವೆ ಮೂಲಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಬೇಕು. ಪ್ರಧಾನಿ ಮೋದಿಯವರು ಕೂಡ ಇದಕ್ಕೆ ಒತ್ತು ಕೊಟ್ಟಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.