Thursday, January 21, 2021
Home ಅಂತರ್ ರಾಜ್ಯ ಮಹಾರಾಷ್ಟ್ರದಲ್ಲಿ 18 ಮಂದಿ ಕಾರ್ಪೊರೇಟರ್ ಗಳು ಕಾಂಗ್ರೆಸ್ ಬಿಟ್ಟು ಎನ್ ಸಿಪಿಗೆ ಸೇರ್ಪಡೆ!

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದಲ್ಲಿ 18 ಮಂದಿ ಕಾರ್ಪೊರೇಟರ್ ಗಳು ಕಾಂಗ್ರೆಸ್ ಬಿಟ್ಟು ಎನ್ ಸಿಪಿಗೆ ಸೇರ್ಪಡೆ!

ಮುಂಬೈಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಿಂದಲೇ ಇದೀಗ ನಾಯಕರು ಎನ್ ಸಿಪಿಗೆ ವಲಸೆ ಹೋಗಿದ್ದಾರೆ.

ಮಹಾರಾಷ್ಟ್ರದ ಬಿವಂಡಿ ನಿಝಂಪುರ್ ಮುನ್ಸಿಪಲ್ ಕಾರ್ಪೊರೇಶನ್ ನ 18 ಕಾಂಗ್ರೆಸ್ ಕಾರ್ಪೊರೇಟರ್ ಗಳು ನಿನ್ನೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ) ಸೇರಿದ್ದಾರೆ. ಅವರಲ್ಲಿ ಉಪ ಮೇಯರ್ ಇಮ್ರಾನ್ ಆಲಿ ಮೊಹಮ್ಮದ್ ಖಾನ್ ಕೂಡ ಸೇರಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಎನ್ ಸಿಪಿಗೆ ಸೇರ್ಪಡೆಗೊಂಡರು.

ಮಹಾರಾಷ್ಟ್ರ ಸರ್ಕಾರದಲ್ಲಿ ಮೈತ್ರಿಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎನ್ ಸಿಪಿ ಮಧ್ಯೆ ನಿನ್ನೆ ಕಾಂಗ್ರೆಸ್ ನಾಯಕರು ಎನ್ ಸಿಪಿಗೆ ಸೇರ್ಪಡೆಗೊಂಡಿದ್ದು ರಾಜಕೀಯವಾಗಿ ಕಾಂಗ್ರೆಸ್ ಗೆ ಭಾರೀ ಮುಖಭಂಗ ಎನ್ನಬಹುದು.

TRENDING