Thursday, January 21, 2021
Home ಬೆಂಗಳೂರು ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ CID ಪೊಲೀಸರ ಧಿಡೀರ್ ದಾಳಿ : ಇಬ್ಬರು ಪದಾಧಿಕಾರಿಗಳ ಬಂಧನ

ಇದೀಗ ಬಂದ ಸುದ್ದಿ

ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ CID ಪೊಲೀಸರ ಧಿಡೀರ್ ದಾಳಿ : ಇಬ್ಬರು ಪದಾಧಿಕಾರಿಗಳ ಬಂಧನ

ಬೆಂಗಳೂರು : ಆಪ್ ಆಧಾರಿತ ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಸಿಐಡಿ ಸೈಬರ್ ಕ್ರೈಮ್ ಪೊಲೀಸರು ದಾಳಿ ನಡೆಸಿದ್ದಾರೆ.

ಆರ್ ಬಿ ಐ ನಿಯಮ ಉಲ್ಲಂಘಿಸಿ ಸಾಲ ನೀಡುತ್ತಿದ್ದ ನಾಲ್ಕು ಕಂಪನಿಗಳ ಮೇಲೆ ದಾಳಿ ನಡೆಸಿದ ಪೊಲೀಸರು ಲ್ಯಾಪ್ ಟಾಪ್ ಮೊಬೈಲ್ ಫೋನ್ ಸೇರಿದಂತೆ ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಇಬ್ಬರು ಪದಾಧಿಕಾರಿಗಳನ್ನು ಬಂಧಿಸಲಾಗಿದೆ.

ಗ್ರಾಹಕರಿಗೆ ಸಾಲ ಕೊಡುತ್ತಿದ್ದ ಈ ಕಂಪನಿಗಳು ಸಾಲ ಮರುಪಾವತಿ ವೇಳೆ ಗ್ರಾಹಕರಿಗೆ ಕಿರುಕುಳ ನೀಡುತ್ತಿದ್ದವು ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಗ್ರಾಹಕರ ವಿಳಾಸ ಫೋಟೋವನ್ನಿಟ್ಟುಕೊಂಡು ದುರ್ಬಳಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ದೂರು ದಾಖಲಿಸಿಕೊಂಡ ಪೊಲೀಸರು ನಾನ್ ಬ್ಯಾಂಕಿಂಗ್ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ.

TRENDING