Wednesday, January 27, 2021
Home ರಾಜ್ಯ ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣ ಭಾಗದ ಜನತೆಗೆ 24 ಗಂಟೆಯೂ ಹಳ್ಳಿಯಲ್ಲೇ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಿಕೊಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಿಸಲು ಗೃಹ ಕಚೇರಿ ಕೃಷ್ಣಾದಲ್ಲಿ ಗೃಹಸಚಿವ ಡಾ. ಕೆ. ಸುಧಾಕರ್ ಮತ್ತು ಅಧಿಕಾರಿಗಳ ತಂಡದೊಂದಿಗೆ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರಾತ್ಯಕ್ಷಿಕೆ ಯೋಜನೆ ಬಗ್ಗೆ ಚರ್ಚೆ ನಡೆಸಿದ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯದ 2380 ಪ್ರಾಥಮಿಕ ಕೇಂದ್ರಗಳಿಗೆ ಆಧುನಿಕತೆಯ ಸ್ಪರ್ಶ ನೀಡಲಿದ್ದು, ದಿನದ 24 ಗಂಟೆ ಕಾರ್ಯನಿರ್ವಹಿಸಲಿವೆ. ಮಹಿಳಾ ವೈದ್ಯರು, ಆಯುಷ್ ವೈದ್ಯರು ಸೇರಿದಂತೆ ಮೂರ್ನಾಲ್ಕು ಜನ ವೈದ್ಯರ ಸೇವೆ ಲಭ್ಯವಿರುತ್ತದೆ.

ಹಾಸಿಗೆಗಳ ಸಾಮರ್ಥ್ಯವನ್ನು 20 ಕ್ಕೆ ಏರಿಕೆ ಮಾಡಲಿದ್ದು, ಎರಡು ಎಕರೆ ಪ್ರದೇಶದಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಮಾಡಲಾಗುವುದು. ರೇಡಿಯಾಲಜಿ ವಿಭಾಗದಲ್ಲಿ ಎಕ್ಸರೇ, ಅಲ್ಟ್ರಾ ಸೌಂಡ್ ಸೌಲಭ್ಯ ಒದಗಿಸಲಾಗುವುದು. ಇದರೊಂದಿಗೆ ಪ್ರತ್ಯೇಕ ಸಣ್ಣ ಶಸ್ತ್ರಚಿಕಿತ್ಸಾ ಕೊಠಡಿ, ತುರ್ತು ಚಿಕಿತ್ಸಾ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿ ಪ್ರಾಥಮಿಕ ಹಂತದ ಪ್ರಯೋಗಾಲಯಗಳನ್ನು ನಿರ್ಮಿಸಲಾಗುವುದು.\

ಮಧುಮೇಹ, ರಕ್ತ ಪರೀಕ್ಷೆ ಸೇರಿದಂತೆ ನಾನಾ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ಸಣ್ಣ ಆಸ್ಪತ್ರೆಗಳಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯವರೆಗೂ ಅಂತರ್ಜಾಲ ಬಳಸಿ ಸಂಪರ್ಕ ಕಲ್ಪಿಸಲಾಗುವುದು. ನವಜಾತ ಶಿಶುಗಳ ಕಾಳಜಿ ಘಟಕ, ಯೋಗ ಮತ್ತು ವೆಲ್ನೆಸ್ ಕೇಂದ್ರ, ವೈದ್ಯರಿಗೆ ಮತ್ತು ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

TRENDING