Monday, January 25, 2021
Home ಕೋವಿಡ್-19 ದೇಶದಲ್ಲಿ ಕಳೆದ 24 ಗಂಟೆಯಲ್ಲಿ 23,068 ಮಂದಿಗೆ ಕೊರೊನಾ ಸೋಂಕು, 336 ಜನ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 23,068 ಮಂದಿಗೆ ಕೊರೊನಾ ಸೋಂಕು, 336 ಜನ ಬಲಿ

 ನವದೆಹಲಿ: ಕಳೆದ 24 ಗಂಟೆಯಲ್ಲಿ 23,068 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,46,846ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 336 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,47,092ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,81,919 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 97,17,834 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 24,661 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

TRENDING