Tuesday, January 19, 2021
Home ರಾಜ್ಯ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ಮಹತ್ವದ ಮಾಹಿತಿ

ಬೆಳಗಾವಿ : ಸವದತ್ತಿಯ ಯಲ್ಲಮ್ಮನಗುಡ್ಡ ರೇಣುಕಾದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ಜಿಲ್ಲಾಡಳಿತ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರೇಣುಕಾದೇವಿ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನವನ್ನು ಡಿಸೆಂಬರ್ 31 ರವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 30 ರಂದು ಹೊಸ್ತಿಲ ಹುಣ್ಣಿಮೆ ಜಾತ್ರೆ ಇರುವುದರಿಂದ ಕೋವಿಡ್ ಹರಡುವಿಕೆ ನಿಯಂತ್ರಿಸಲು ಡಿಸೆಂಬರ್ 31 ರವರೆಗೆ ದೇವಾಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.ಜಾತ್ರ ಮಹೋತ್ಸವದಲ್ಲಿ ಭಕ್ತರ ಪಾಲ್ಗೊಳ್ಳುವಿಕೆ ನಿರ್ಬಂಧಿಸಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಣಯಿಸಲಾಗಿದೆ ಎಂದು ಪ್ರಕರಣೆಯಲ್ಲಿ ತಿಳಿಸಿದ್ದಾರೆ.

TRENDING