Wednesday, January 27, 2021
Home ಸುದ್ದಿ ಜಾಲ ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಇದೀಗ ಬಂದ ಸುದ್ದಿ

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು

 ಚಿತ್ತೂರು : ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಪಟ್ಟಣದ ನೇಂಡ್ರಗುಂಟದಲ್ಲಿ ನಡೆದಿದೆ.

ಕಾರಿನಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಮಹಿಳೆಯರ ಪೈಕಿ ಇಬ್ಬರು ಮಹಿಳೆಯರು ಬೆಂಗಳೂರಿನವರು ಎಂದು ತಿಳಿದುಬಂದಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ

TRENDING