Tuesday, January 26, 2021
Home ಕೋವಿಡ್-19 ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 22,272 ಹೊಸ ಸೋಂಕು ಪ್ರಕರಣಗಳು ಪತ್ತೆ!

ಇದೀಗ ಬಂದ ಸುದ್ದಿ

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 22,272 ಹೊಸ ಸೋಂಕು ಪ್ರಕರಣಗಳು ಪತ್ತೆ!

 ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 251 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,47,343ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 22,274 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 97,40,108ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 2,81,667 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 8,53,527 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೆ ಈ ವರೆಗೂ 16,71,59,289 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

TRENDING