Tuesday, January 19, 2021
Home ಸುದ್ದಿ ಜಾಲ ಶೋಪಿಯಾನ್: ಓರ್ವ ಉಗ್ರ ಸಾವು, ಇಬ್ಬರು ಯೋಧರಿಗೆ ಗಾಯ

ಇದೀಗ ಬಂದ ಸುದ್ದಿ

ಶೋಪಿಯಾನ್: ಓರ್ವ ಉಗ್ರ ಸಾವು, ಇಬ್ಬರು ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಉಗ್ರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಈ ವೇಳೆ ಯೋಧರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೇನೆಯ ಯೋಧರು ದಾಳಿ ನಡೆಸಿದ್ದು ಪರಿಣಾಮ ಓರ್ವ ಉಗ್ರ ಹತ್ಯೆಯಾಗಿದ್ದಾನೆ.

ಹತ್ಯೆಗೀಡಾದ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

TRENDING