Tuesday, January 26, 2021
Home ಸುದ್ದಿ ಜಾಲ ಹಣ ಕೊಡದೆ ಜನರ ಹಾದಿ ತಪ್ಪಿಸುತ್ತಿರುವ ಪ್ರಧಾನಿ : ಮೋದಿಗೆ ದೀದಿ ತಿರುಗೇಟು

ಇದೀಗ ಬಂದ ಸುದ್ದಿ

ಹಣ ಕೊಡದೆ ಜನರ ಹಾದಿ ತಪ್ಪಿಸುತ್ತಿರುವ ಪ್ರಧಾನಿ : ಮೋದಿಗೆ ದೀದಿ ತಿರುಗೇಟು

ನವದೆಹಲಿ: ಪಶ್ಚಿಮ ಬಂಗಾಳದ ರೈತರಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯ ತಲುಪುತ್ತಿಲ್ಲ. ಇದಕ್ಕೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆ ನೀಡಿದ್ದಾರೆ. ಅವರು ರಾಜಕೀಯ ಮಾಡುತ್ತಿರುವ ಕಾರಣ ಪಶ್ಚಿಮ ಬಂಗಾಳ ರೈತರು ಯೋಜನೆಯಿಂದ ವಂಚಿತರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ರಾಜಕೀಯ ಮಾಡುತ್ತಿದ್ದಾರೆ. ಅವರ ಸಿದ್ಧಾಂತಗಳನ್ನು ಪಶ್ಚಿಮ ಬಂಗಾಳ ಮತ್ತು ದೇಶದ ಜನ ನೋಡಿದ್ದಾರೆ. ಅವರು ಸ್ವಾರ್ಥದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದ ಜನರ ಸೇವೆಗೆ ಬದ್ಧವಾಗಿರುವುದು ನನ್ನ ಸಿದ್ಧಾಂತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ತಲುಪಿಲ್ಲ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಪಶ್ಚಿಮಬಂಗಾಳದ ರೈತರಿಗೆ ಹಣವನ್ನು ಬಿಡುಗಡೆ ಮಾಡೇ ಇಲ್ಲ. ಹಲವು ಬಾರಿ ಪತ್ರ ಬರೆದರೂ ಸ್ಪಂದಿಸಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮೋದಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ನೀಡಬೇಕಿರುವ ಜಿಎಸ್ಟಿ, ಅನುದಾನ ಮತ್ತು ಕಿಸಾನ್ ಸಮ್ಮಾನ್ ನಿಧಿ ಹಣವನ್ನು ಕೇಂದ್ರ ಸರ್ಕಾರ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

TRENDING