Monday, January 18, 2021
Home ರಾಜ್ಯ ಇಂದು ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ : 1,05,431 ಅಭ್ಯರ್ಥಿಗಳ ಹಣೆಬರಹ ನಿರ್ಧಾರ

ಇದೀಗ ಬಂದ ಸುದ್ದಿ

ಇಂದು ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ : 1,05,431 ಅಭ್ಯರ್ಥಿಗಳ ಹಣೆಬರಹ ನಿರ್ಧಾರ

 ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

2709 ಗ್ರಾಮಪಂಚಾಯಿತಿಗಳಿಗೆ ಮತದಾನ ನಡೆಯಲಿದ್ದು, ಡಿಸೆಂಬರ್ 30 ರಂದು ಮೊದಲ ಮತ್ತು ಎರಡನೇ ಹಂತದ ಮತದಾನದ ಫಲಿತಾಂಶ ಪ್ರಕಟವಾಗಲಿದೆ.

ಇಂದು 39,378 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3697 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 109 ತಾಲ್ಲೂಕುಗಳ 1.40 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

TRENDING