Tuesday, January 19, 2021
Home ಅಂತರ್ ರಾಜ್ಯ ಮುಂಬೈ: ಸಾಯಿ ಬಾಬಾ ದೇವಸ್ಥಾನದಲ್ಲಿ ಬೆಂಕಿ - ಇಬ್ಬರು ಸಾವು

ಇದೀಗ ಬಂದ ಸುದ್ದಿ

ಮುಂಬೈ: ಸಾಯಿ ಬಾಬಾ ದೇವಸ್ಥಾನದಲ್ಲಿ ಬೆಂಕಿ – ಇಬ್ಬರು ಸಾವು

 ಮುಂಬೈನಗರದ ಕಾಂದಿವಲಿ ಪ್ರದೇಶದಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಾರ್ಟ್‌ ಸರ್ಕಿಟ್‌ನಿಂದಾಗಿ ಈ ದುರಂತ ಸಂಭವಿಸಿರಬಹುದು. ದೇವಸ್ಥಾನದ ಮುಖ್ಯ ಬಾಗಿಲನ್ನು ಬಂದ್‌ ಮಾಡಿ ಮೂವರು ದೇವಸ್ಥಾನದ ಸಂಕೀರ್ಣದೊಳಗೆ ಮಲಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡಿದ್ದ ಮೂವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಇಬ್ಬರು ಮೃತಪಟ್ಟಿದ್ದರು ಎಂದಿದ್ದಾರೆ.

TRENDING