Wednesday, January 20, 2021
Home ಸುದ್ದಿ ಜಾಲ JDU ಅಧ್ಯಕ್ಷ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಇದೀಗ ಬಂದ ಸುದ್ದಿ

JDU ಅಧ್ಯಕ್ಷ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಸಂಸದ ಆರ್.ಸಿ.ಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್ ಕುಮಾರ್ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೇ ವೇಳೆ ನೂತನ ಅಧ್ಯಕ್ಷರಾಗಿ ಆರ್.ಸಿ.ಪಿ ಸಿಂಗ್ ಹೆಸರನ್ನು ನಿತೀಶ್ ಸೂಚಿಸಿದ್ದಾರೆ. ಇದಕ್ಕೆ ಉಳಿದ ಸದಸ್ಯರು ಅನುಮೋದಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಜೆಡಿಯುನ 6 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆದಿದ್ದು, ನಿತೀಶ್ ಕುಮಾರ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

TRENDING