Saturday, January 23, 2021
Home ಸುದ್ದಿ ಜಾಲ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಇದೀಗ ಬಂದ ಸುದ್ದಿ

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೈದರಾಬಾದ್: ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ‘ಅನ್ನಾತೆ’ ಚಿತ್ರದ ಶೂಟಿಂಗ್ ನಲ್ಲಿ ನಟ ರಜನಿಕಾಂತ್ ಪಾಲ್ಗೊಂಡಿದ್ದರು. ಆದರೆ ಸಿನಿಮಾ ಸೆಟ್ ನಲ್ಲಿ ಹಲವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ತಾತ್ಕಾಲಿಕವಾಗಿ ಶೂಟಿಂಗ್ ಸ್ಥಗಿತಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ರಜನಿಕಾಂತ್ ಅನಾರೋಗ್ಯಕ್ಕೀಡಾಗಿದ್ದರು.

ರಜನಿ ಅವರಿಗೆ ಕೋವಿಡ್ ನೆಗೆಟಿವ್ ಬಂದಿದ್ದರೂ ಅವರ ರಕ್ತದೊತ್ತಡದಲ್ಲಿ ತೀವ್ರ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ರಜನಿಕಾಂತ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದಿದ್ದು, ರಕ್ತದೊತ್ತಡ ನಾರ್ಮಲ್ ಸ್ಥಿತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಜನಿಕಾಂತ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

TRENDING