Saturday, January 23, 2021
Home ರಾಜ್ಯ ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಬಹುಮುಖ್ಯ ಮಾಹಿತಿ

 ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ವೇತನ ಹೆಚ್ಚಳದ ಕುರಿತಂತೆ ಚರ್ಚೆ ನಡೆಸಲು ಡಿಸೆಂಬರ್ 29 ರಂದು ಸಭೆ ನಡೆಸಲಾಗುತ್ತಿದೆ.

ಆರನೇ ವೇತನ ಆಯೋಗದ ಶಿಫಾರಸುಗಳನ್ನು ತಮ್ಮ ವೇತನಕ್ಕೆ ಪರಿಗಣಿಸಬೇಕೆಂದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಸಾರಿಗೆ ನೌಕರರು ಇತ್ತೀಚೆಗೆ ಮುಷ್ಕರ ಕೈಗೊಂಡಿದ್ದರು. ಮುಷ್ಕರದ ನಂತರ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕೈಗೊಂಡಿದೆ.

ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಡಿಸೆಂಬರ್ 29 ರಂದು ಸರ್ಕಾರ ಸಭೆ ಕರೆದಿದ್ದು, ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

TRENDING