Wednesday, January 27, 2021
Home ರಾಜ್ಯ ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರೈತರಿಗೆ ಸಾಲ ಪಡೆಯುವ ಸಂದರ್ಭದಲ್ಲಿ ಸಿಬಿಲ್ ಸ್ಕೋರ್ ಪರಿಗಣಿಸಬಾರದು ಎಂದು ರಾಜ್ಯ ಸರ್ಕಾರ ಹೇಳಿದೆ.

ಬ್ಯಾಂಕುಗಳ ಮುಂದೆ ಈ ಪ್ರಸ್ತಾವನೆ ಇಡಲಾಗಿದೆ. ಸಾಲಕ್ಕೆ ಅರ್ಜಿ ಸಲ್ಲಿಸಿದವರ ಸಾಲ ಪಡೆಯುವ ಸಾಮರ್ಥ್ಯವನ್ನು ಸಿಬಿಲ್ ಸ್ಕೋರ್ ಮೂಲಕ ಪರಿಗಣಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಬ್ಯಾಂಕುಗಳು ಸಾಲ ನೀಡುವ ಸಂದರ್ಭದಲ್ಲಿ ಸಿಬಿಲ್ ಸ್ಕೋರ್ ಆಧರಿಸಿ ಸಾಲ ನೀಡುತ್ತವೆ.

ಸಾಲ ಮರುಪಾವತಿ, ಕ್ರೆಡಿಟ್ ಕಾರ್ಡ್ ಬಾಕಿ, ತಪ್ಪಾದ ಮಾಹಿತಿ ಮೊದಲಾದವುಗಳನ್ನು ಆಧರಿಸಿ ಸಿಬಿಲ್ ಸ್ಕೋರ್ ಪರಿಗಣಿಸಿ ಬ್ಯಾಂಕುಗಳು ಸಾಲ ನೀಡುತ್ತವೆ. ರೈತರಿಗೆ ಸಿಬಿಲ್ ಸ್ಕೋರ್ ಅನ್ವಯಿಸಬಾರದು ಎಂಬುದು ಸರ್ಕಾರದ ಸಲಹೆಯಾಗಿದೆ.

ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಹಲವು ಸಂದರ್ಭದಲ್ಲಿ ರೈತರಿಗೆ ಸಮಸ್ಯೆಯಾಗುತ್ತದೆ. ಇದರಿಂದ ನಿಗದಿತ ಸಮಯದಲ್ಲಿ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಪಡೆಯಲು ಸಾಧ್ಯವಾಗುವುದಿಲ್ಲ. ರೈತರಿಗೆ ಸಿಬಿಲ್ ಸ್ಕೋರ್ ಮಾನದಂಡವನ್ನು ಅನ್ವಯಿಸಬಾರದೆಂದು ಸರ್ಕಾರಕ್ಕೆ ರೈತರು ಮನವಿ ಮಾಡಿದ್ದು, ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿ ರಾಜ್ಯದ ಬ್ಯಾಂಕರುಗಳ ಸಮಿತಿ ಕನ್ವೀನರ್ ಗೆ ಪತ್ರ ಬರೆದು ಈ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಡಿಸೆಂಬರ್ 28 ರಂದು ರಾಜ್ಯ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ರೈತರಿಗೆ ಸಿಬಿಲ್ ಸ್ಕೋರ್ ಅನ್ವಯಿಸದೇ ಸಾಲ ನೀಡಬೇಕೆಂಬುದರ ಕುರಿತಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸಿಬಿಲ್ ಸ್ಕೋರ್ ಕಾರಣದಿಂದ ಸಾಲ ಪಡೆಯಲು ಸಾಧ್ಯವಾಗದ ರೈತರಿಗೆ ಸಾಲ ಸೌಲಭ್ಯ ಕಲ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

TRENDING