Monday, January 18, 2021
Home ರಾಜ್ಯ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತು ಮಹತ್ವದ ಮಾಹಿತಿ ನೀಡಿದ ಸಚಿವ ಕೆ.ಸುಧಾಕರ್

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತು ಮಹತ್ವದ ಮಾಹಿತಿ ನೀಡಿದ ಸಚಿವ ಕೆ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಯಾವಾಗ ಆರಂಭವಾಗಲಿದೆ ಎಂಬುದಾಗಿ ಕುತೂಹಲ ಮೂಡಿಸಿತ್ತು. ಅಲ್ಲದೇ ನಿಗದಿ ಪಡಿಸಿದಂತೆ ರಾಜ್ಯದಲ್ಲಿ ಜನವರಿ 1ರಿಂದ ಶಾಲಾ-ಕಾಲೇಜು ಆರಂಭಗೊಳ್ಳಲಿದೆ ಎನ್ನಲಾಗುತ್ತಿತ್ತು. ಆದ್ರೇ.. ಕೊರೋನಾ ವೈರಸ್ ರೂಪಾಂತರದ ಭೀತಿಯಿಂದಾಗಿ, ಇದೀಗ ಜನವರಿ 1ರಿಂದ ಶಾಲಾ-ಕಾಲೇಜು ಆರಂಭ ಡೌಟ್ ಎನ್ನಲಾಗುತ್ತಿದೆ. ಯಾಕೆಂದ್ರೇ ಸ್ವತಹ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಯುಕೆಯಿಂದ ಬಂದ 14 ಜನರ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದ ನಂತ್ರವೇ ಪರಾಮರ್ಶಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಜನವರಿ 1ರಿಂದ ಬೋರ್ಡ್ ಪರೀಕ್ಷೆಗಳಿರುವಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭಿಸುವುದಾಗಿ ಘೋಷಿಸಲಾಗಿತ್ತು. ಆದ್ರೇ ಇದೀಗ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಆರಂಭಗೊಳ್ಳಲಿದ್ದ ಶಾಲಾ-ಕಾಲೇಜುಗಳಿಗೆ ಕೊರೋನಾ ರೂಪಾಂತರ ವೈರಸ್ ನ ಮತ್ತೊಂದು ಭೀತಿ ಎದುರಾಗಿದೆ. ಹೀಗಾಗಿ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಜನವರಿ 1ರಿಂದ ಡೌಟ್ ಎನ್ನಲಾಗುತ್ತಿದೆ.

ಈ ಮಧ್ಯೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಕೊರೋನಾ ರೂಪಾಂತರಿ ವೈರಸ್ ಪತ್ತೆ ಕಾರ್ಯ ನಡೆಯುತ್ತಿದೆ. ವಂಶವಾಯಿಯ ವರದಿ ಬಂದ ನಂತ್ರವೇ ಶಾಲಾ-ಕಾಲೇಜು ಆರಂಭಿಸಬೇಕಾ ಅಥವಾ ಬೇಡವಾ ಎನ್ನುವ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದಿದ್ದಾರೆ.

TRENDING