Tuesday, January 26, 2021
Home ಸುದ್ದಿ ಜಾಲ ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ರೈಲ್ವೆ ವೀಲ್ ಪ್ಲಾಂಟ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://rwf.indianrailways.gov.in/ ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್, ಐಟಿ, ಎಲೆಕ್ಟ್ರಾನಿಕ್ಸ್ ಇನ್ ಸ್ಟ್ರುಮೆಂಟೇಶನ್) ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶಿಕ್ಷಣ ಅರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪಡೆಯಬಹುದು. ವಿದ್ಯಾರ್ಹತೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ನೀಡಲಾಗಿದೆ.

ನೇಮಕಾತಿ ವಿವರಗಳು

1-ಪದವೀಧರ ಎಂಜಿನಿಯರ್ ಗಳು – 10 ಹುದ್ದೆಗಳು
2-ಡಿಪ್ಲೊಮಾ ಆಫ್ ಎಂಜಿನಿಯರಿಂಗ್ – 60 ಹುದ್ದೆಗಳು

ಅರ್ಜಿ ಸಲ್ಲಿಸುವುದು ಹೇಗೆ

ಅಭ್ಯರ್ಥಿಗಳು ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಪೋರ್ಟಲ್ ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2021ರ ಜನವರಿ 14. ಇದಕ್ಕಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಆಯ್ಕೆ ಪ್ರಕ್ರಿಯೆ

ಈ ಹುದ್ದೆಗಳಿಗೆ ನೇರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಇರುವುದಿಲ್ಲ. ಎಂಜಿನಿಯರಿಂಗ್ ಡಿಪ್ಲೊಮಾ/ಡಿಗ್ರಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆಯ್ಕೆ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

TRENDING