ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಡಿಸೆಂಬರ್ 18ರಂದು ಕೋವಿಡ್-19ಸೋಂಕು ದೃಢಪಟ್ಟಿತ್ತು. ಹೀಗಾಗಿ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಸಂಜೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಲಗಳ ಪ್ರಕಾರ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.