Monday, January 18, 2021
Home ಕೋವಿಡ್-19 ದೇಶದಲ್ಲಿಒಂದೇ ದಿನ 20,021 ಜನರಲ್ಲಿ ಕೊರೊನಾ ಪತ್ತೆ; 279 ಮಂದಿ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿಒಂದೇ ದಿನ 20,021 ಜನರಲ್ಲಿ ಕೊರೊನಾ ಪತ್ತೆ; 279 ಮಂದಿ ಬಲಿ

ನವದೆಹಲಿ: ಹೊಸ ಕೊರೊನಾ ಸೋಂಕಿನ ಆತಂಕದ ನಡುವೆಯೂ ಕಳೆದ 24 ಗಂಟೆಯಲ್ಲಿ 20,021 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,07,871ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 279 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,47,901ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,77,301 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 97,82,669 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 21,131 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 7,15,397 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 16,88,18,054 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

TRENDING