Wednesday, January 27, 2021
Home ಕೋವಿಡ್-19 ‘ಯುಕೆ’ ಯಿಂದ ರಾಜ್ಯಕ್ಕೆ ಬಂದ 26 ಮಂದಿಗೆ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

‘ಯುಕೆ’ ಯಿಂದ ರಾಜ್ಯಕ್ಕೆ ಬಂದ 26 ಮಂದಿಗೆ ಕೊರೋನಾ ಪಾಸಿಟಿವ್

 ಬೆಂಗಳೂರು : ರಾಜ್ಯಕ್ಕೆ ಯುಕೆಯಿಂದ ಬಂದಂತ 1,614 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 26 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಇದುವರೆಗೆ ರಾಜ್ಯಕ್ಕೆ ಯುಕೆಯಿಂದ ಬಂದಂತ 1614 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ನಿನ್ನೆ ಸಂಜೆಯವರೆಗೆ ಪರೀಕ್ಷೆ ನಡೆಸಿದ ನಂತ್ರ ಸಿಕ್ಕ ವರದಿಯಂತೆ 26 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ ಎಂದು ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಂತ 26 ಜನರ ಕೋವಿಡ್ ಸ್ವ್ಯಾಬ್ ಮಾದರಿಯನ್ನು ನಿಮ್ಹಾನ್ಸ್ ಗೆ ಕಳುಹಿಸಿಕೊಡಲಾಗಿದೆ. ಅಲ್ಲಿ ಕೊರೋನಾ ರೂಪಾಂತರ ವೈರಸ್ ಬಗ್ಗೆಯೂ ಪರೀಕ್ಷೆ ನಡೆಯಲಿದೆ. ಅಲ್ಲಿನ ವರದಿಯನ್ನು ಎಸ್‌ಓಪಿ ಅನುಸಾರವಾಗಿ ಐಸಿಎಂಆರ್ ಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿಂದಲೇ ಕೊರೋನಾ ರೂಪಾಂತರ ದೃಢಪಟ್ಟಿದ್ಯಾ ಎನ್ನುವ ಮಾಹಿತಿ ಹೊರ ಬೀಳಲಿದೆ ಎಂದರು.

ಈಗಾಗಲೇ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಂತ ಯುಕೆಯಿಂದ ಬಂದ 26 ಜನರನ್ನು ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಯಾರಿಗೂ ತೀವ್ರ ತರವಾದಂತ ತೊಂದರೆಯಿಲ್ಲ. ಚಿಕಿತ್ಸೆ ಮುಂದುವರೆದಿದೆ. ಕೋವಿಡ್ ರೂಪಾಂತರ ವೈರಸ್ ಪರೀಕ್ಷೆ ನಂತ್ರವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.

ಕೋವಿಡ್ ರೂಪಾಂತರ ವೈರಸ್ ಭೀತಿಯ ಹಿನ್ನಲೆಯಲ್ಲಿ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭ ಮಾಡಬೇಕೋ ಬೇಡವೋ ಎನ್ನುವ ಬಗ್ಗೆ ಇಂದು, ಗೃಹಸಚಿವರು, ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು ನಡೆಯುತ್ತಿರುವಂತ ಸಭೆಯಲ್ಲಿ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

TRENDING