ಗಿಲ್ಗಿಟ್ : ಗಿಲ್ಗಿಟ್–ಬಾಲ್ಟಿಸ್ತಾನ್ ನಲ್ಲಿ ತಾಂತ್ರಿಕ ಕಾರಣಗಳಿಂದ ಸೇನಾ ಹೆಲಿಕಾಪ್ಟರ್ ಪತನಗೊಂಡು ನಾಲ್ವರು ಪಾಕಿಸ್ತಾನ ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪಾಕ್ ಸೇನೆ ತಿಳಿಸಿದೆ.
ಶನಿವಾರ ಸಂಜೆ ಅಸ್ಟೋರೆ ಜಿಲ್ಲೆಯ ಮಿನಿಮಾರ್ಗ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಪೈಲೆಟ್, ಸಹ ಪೈಲೆಟ್, ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಪಾಕ್ ಸೇನೆ ತಿಳಿಸಿದೆ.
ಸೈನಿಕರ ಮೃತದೇಹವನ್ನು ಸ್ಕಾರ್ಡು ವಿನ ಮಿಲಿಟರಿ ಆಸ್ಪತ್ರೆಗೆ ಸಾಗಿಸುತ್ತಿದೆ. ತಾಂತ್ರಿಕ ಕಾರಣಗಳಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.