Monday, January 25, 2021
Home ಸುದ್ದಿ ಜಾಲ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟರೂ ಸಾರಿಗೆ ನೌಕರರಿಗೆ ಪರಿಹಾರ : ಹೈಕೋರ್ಟ್ ಮಹತ್ವದ ತೀರ್ಪು

ಇದೀಗ ಬಂದ ಸುದ್ದಿ

ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟರೂ ಸಾರಿಗೆ ನೌಕರರಿಗೆ ಪರಿಹಾರ : ಹೈಕೋರ್ಟ್ ಮಹತ್ವದ ತೀರ್ಪು

ರಸ್ತೆ ಸಾರಿಗೆ ನೌಕರರು ಕರ್ತವ್ಯ ನಿರ್ವಹಣೆ ಮಾಡುವ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದರೆ ಅಂತಹ ಪ್ರಕರಣವನ್ನು ಅಪಘಾತವೆಂದು ಪರಿಗಣಿಸಬೇಕು ಎಂದು ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.

ಈ ಆದೇಶದ ಮೂಲಕ ಈಶಾನ್ಯ ರಸ್ತೆ ಸಾರಿಗೆ ನಿಗಮದ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದು, ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಮತ್ತು ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದೆ.

ಅಪಘಾತ ಯಾರೂ ಊಹಿಸಲಾಗದ ಅನಿರೀಕ್ಷಿತ ಘಟನೆಯಾಗಿರುತ್ತದೆ. ಅದೇ ರೀತಿ ಹೃದಯಾಘಾತವೂ ಕೂಡಾ ಅನಿರೀಕ್ಷಿತವಾಗಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಕರ್ತವ್ಯ ನಿರ್ವಹಣೆ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದರೆ ಅದನ್ನು ಅಪಘಾತವೆಂದು ಪರಿಗಣಿಸಬೇಕು ಎಂದು ಆದೇಶಿಸಲಾಗಿದೆ.

TRENDING