Saturday, January 23, 2021
Home ಕೋವಿಡ್-19 ಬೆಂಗಳೂರಿನಲ್ಲಿಂದು 370 ಕೊರೊನಾ ಪಾಸಿಟಿವ್ ಕೇಸ್ ಪತ್ತೆ : ಇಬ್ಬರು ಸಾವು

ಇದೀಗ ಬಂದ ಸುದ್ದಿ

ಬೆಂಗಳೂರಿನಲ್ಲಿಂದು 370 ಕೊರೊನಾ ಪಾಸಿಟಿವ್ ಕೇಸ್ ಪತ್ತೆ : ಇಬ್ಬರು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕೂಡ ಕೊರೊನಾ ಸೋಂಕಿತರ ಸಂಖ್ಯೆ ಇಳಿದಿದ್ದು., ಬೆಂಗಳೂರಿನಲ್ಲಿ 370 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ 370 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 387278 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 843 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಬೆಂಗಳೂರಿನಲ್ಲಿ 375221 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 2 ಮಂದಿ ಬಲಿಯಾಗಿದ್ದು, ಕೊರೊನಾ ಸಾವಿನ ಸಂಖ್ಯೆ 4306 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೂಡ ಕೊರೋನಾ ಇಳಿಕೆ ಕಂಡಿದೆ. ಇಂದು ಹೊಸದಾಗಿ 662 ಜನರಿಗೆ ಮಾತ್ರವೇ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,17,571 ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 662 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 9,17,571 ಕ್ಕೆ ಏರಿಕೆಯಾಗಿದೆ. ಇಂದು 1,344 ಸೋಂಕಿತರು ಸೇರಿದಂತೆ ಇದುವರೆಗೆ 8,93,617 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 12,074 ಆಗಿದೆ ಎಂಬುದಾಗಿ ತಿಳಿಸಿದೆ.

TRENDING