Wednesday, January 27, 2021
Home ರಾಜ್ಯ ಡಿ. 31ರಿಂದ ಎರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ಡಿ. 31ರಿಂದ ಎರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು, ಡಿ. 29: ಡಿಸೆಂಬರ್ 31ರಿಂದ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ನಗರದಲ್ಲಿ 29 ಡಿಗ್ರಿ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೀದರ್‌ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆದಿದ್ದು, ತಾಪಮಾನ ಕಡಿಮೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉಡುಪಿಯಲ್ಲಿ 33 ಡಿಗ್ರಿ ಗರಿಷ್ಠ ಉಷ್ಣಾಂಶವಿರಲಿದೆ. ಮಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ. ಬೆಳಗಾವಿ 31-16, ಮೈಸೂರು 31-19, ಮಂಡ್ಯ 31-19, ರಾಮನಗರ 29-19, ಮಡಿಕೇರಿ 28-16, ವಿಜಯಪುರ 27-17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ.

TRENDING